ಬೆಂಗಳೂರು : ಕಾಂಗ್ರೆಸ್ ನಿಂದ ಅನರ್ಹಗೊಂಡ ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿರುವುದು ಇದೀಗ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಹೌದು. ಇಂದು ಶಾಸಕ ಡಾ.ಕೆ ಸುಧಾಕರ್ ಅವರು ಸಿಎಂ ಯಡಿಯೂರಪ್ಪ ನಿವಾಸಕ್ಕೆ ಭೇಟಿ ಮಾತುಕತೆ ನಡೆಸಿದ ನಂತರ ಇದೀಗ ಮತ್ತೊಬ್ಬ ಅನರ್ಹ ಶಾಸಕ ರೋಷನ್ ಬೇಗ್ ಅವರು ಭೇಟಿ ನೀಡಿ ತನನ್ನು ಕಾಪಾಡಿ ಎಂದು ಸಿಎಂ ಬಳಿ ಮನವಿ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.