ಬೆಂಗಳೂರು ನಗರದ ಸಂಚಾರದ ದಟ್ಟಣೆ ಕಡಿಮೆ ಮಾಡುವ, ಸರಕು ಸಾಗಣೆ ವಾಹನಗಳ ತಡೆರಹಿತ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಸ್ಯಾಟಲೈಟ್ ಟೌನ್ ರಿಂಗ್ ರೋಡ್ನ ಮೊದಲ ಹಂತದ ದೊಡ್ಡಬಳ್ಳಾಪುರ-ಹೊಸಕೋಟೆ ಮಾರ್ಗ ಸಂಚಾರಕ್ಕೆ ಇಂದಿನಿಂದ ಮುಕ್ತವಾಗಿದೆ.ದೊಡ್ಡಬಳ್ಳಾಪುರ ಬೈಪಾಸ್ನಿಂದ ಆರಂಭಗೊಂಡು ಹೊಸಕೋಟೆ ವರೆಗಿನ ನಾಲ್ಕು ಪಥ ರಸ್ತೆಯ 47 ಕಿ.ಮಿ.ನಿಂದ 76.150 ಕಿ.ಮಿ ವರೆಗೆ ಬಳಕೆದಾರರಿಗೆ ನಲ್ಲೂರು ದೇವನಹಳ್ಳಿ ಸುಂಕ ವಸೂಲಾತಿ ಕೇಂದ್ರದಲ್ಲಿ ಇಂದಿನಿಂದ ಶುಲ್ಕ ಸಂಗ್ರಹ ಮಾಡಲಾಗುತ್ತದೆ. ಇದು 2024ರ ಮಾರ್ಚ್31 ರವರೆಗೆ