ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿವೆ. ಅಲ್ಲದೆ ಇಂದು ಡೆಂಗ್ಯೂಗೆ ಮತ್ತೊಬ್ಬರು ಬಲಿಯಾಗಿದ್ದು ಇಡೀ ಜಿಲ್ಲೆಯಲ್ಲಿ ಆತಂಕ ಆವರಿಸಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಎರಡನೇ ಬಲಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಖಾಜಿಯಾ ಸ್ಟ್ರೀಟ್ ನಿವಾಸಿ ಮೊಹಮ್ಮದ್ ಮೀರಾನ್ ಸಾದಾ ಎಂಬುವವರು ಡೆಂಗ್ಯೂ ಜ್ವರಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ.ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೀರಾನ್, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟಿದ್ದಾರೆ. ನಿನ್ನೆಯಷ್ಟೇ ಡೆಂಗ್ಯೂ ಜ್ವರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ