ಚುನಾವಣೆ ಸಂದರ್ಭದಲ್ಲಿ ಪಕ್ಷದ ವಿರುದ್ಧ ನಡೆದುಕೊಂಡರೆ ಅಂತಹವರು ಎಷ್ಟೇ ದೊಡ್ಡವರಾದರೂ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ತುರುವೇಕೆರೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ತುರುವೇಕೆರೆಗೆ ಟಿಕೆಟ್ ಯಾರಿಗೆ ನೀಡುತ್ತೇವೆ ಗೊತ್ತಿಲ್ಲ. ಯಾರಿಗೆ ಟಿಕೆಟ್ ಸಿಕ್ಕರೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ನಮಗೆ ಕಾಂಗ್ರೆಸ್ ಗೆಲ್ಲುವುದು ಮುಖ್ಯವಾಗಿದ್ದು, ಪಕ್ಷ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಬಿಜೆಪಿಯವರು ಕೊಮುಗಲಭೆ