ಪಕ್ಷ ವಿರೋಧ ಚಟುವಟಿಕೆ ಮಾಡಬೇಡಿ. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ರೆ ಪಕ್ಷದಿಂದ ಹೊರಹಾಕುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗುಡುಗಿದ್ದಾರೆ. ನಗರದ ಮಾಗಾವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಕಾಂಗ್ರೆಸ್ ಸಮಾವೇಶಕ್ಕೆ ಸಾವಿರಾರು ಕಾರ್ಯಕರ್ತರ ದಂಡು ಹರಿದುಬಂದಿತು. ಹಾವೇರಿಯಲ್ಲಿ ಆಯೋಜಿಸಲಾದ ಬೂತ್ ಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳನ್ನು ಮಾಡಬೇಡಿ. ಮಾಡಿದ್ರೆ ಪಕ್ಷದಿಂದ ಹೊರಹಾಕುತ್ತೇವೆ. ಪಕ್ಷ ವಿರೋಧಿ ಧೋರಣೆ ನಾನಂತೂ ಸಹಿಸುವುದಿಲ್ಲ ಎಂದು ಕಾರ್ಯಕರ್ತರಿಗೆ