ಸಾಕಷ್ಟು ವಿವಾದ ಸೃಷ್ಟಿಸಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಇದೀಗ ಮತ್ತೆ ಭುಗಿಲೆದ್ದಿದೆ. ಜಾಮಿಯಾ ಮಸೀದಿಯ ಒಳಭಾಗದಲ್ಲಿ ನಡೆಯುತ್ತಿರುವ ಮದರಸಾ ತೆರವಿಗೆ ಹಿಂದೂ ಜಾಗರಣ ವೇದಿಕೆ ಮಂಡ್ಯ ಜಿಲ್ಲಾಡಳಿತಕ್ಕೆ ಗಡುವು ನೀಡಿದೆ.