ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ 2019-20ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಕಲಬುರಗಿ ಜಿಲ್ಲೆಯ ಸಫಾಯಿ ಕರ್ಮಚಾರಿ, ಮ್ಯಾನ್ಯುಯಲ್ ಸ್ಕಾವೆಂಜರ್ ಮತ್ತು ಅವರ ಅವಲಂಬಿತರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.ಅರ್ಹ ಫಲಾನುಭವಿಗಳು ಸ್ವಯಂ ಉದ್ಯೋಗ ಯೋಜನೆ (ಐ.ಎಸ್.ಬಿ.), ಸಮೃದ್ದಿ ಯೋಜನೆ, ಉನ್ನತಿ ಯೋಜನೆ, ಐರಾವತ