ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ನಿರೀಕ್ಷೆಯಲ್ಲಿ ಕಾದು ಕುಳಿತಿದ್ದ ಮಹಿಳೆಯರಿಗೆ ಕೊನೆಗೂ ಗುಡ್ನ್ಯೂಸ್ ಸಿಕ್ಕಿದೆ. ಇದೇ ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶನಿವಾರ ಸುದ್ದಿಗೋಷ್ಠಿ ನಡೆಸಿ, ಜು.17 ರಂದು (ಸೋಮವಾರ) ಗೃಹಲಕ್ಷ್ಮಿ ಯೋಜನೆ ಆ್ಯಪ್ಗೆ ಚಾಲನೆ ನೀಡಲಾಗುವುದು. ಜು.19 ರಿಂದ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು. ಯೋಜನೆಯಡಿ ಫಲಾನುಭವಿಯು ಯಾವುದೇ