ಬೆಂಗಳೂರು, ಸೆ 06 : ಕರ್ನಾಟಕ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತು ಬದ್ಧ ಅನುಮತಿಯನ್ನು ನೀಡಿದೆ. ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕು ಎಂದು ಸರ್ಕಾರದ ಮೇಲೆ ಭಾರೀ ಒತ್ತಡ ಹಾಕಲಾಗಿತ್ತು. ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 3 ದಿನ ಮಾತ್ರ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಒಪ್ಪಿಗೆ ಕೊಡಲಾಗಿದೆ. ಕಂದಾಯ ಸಚಿವ ಆರ್. ಅಶೋಕ ಸೇರಿದಂತೆ ಹಲವಾರು ಸಚಿವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಮೂರು ದಿನ ಮಾತ್ರ ಸಾರ್ವಜನಿಕ