ಅಭಿಮಾನಿಗಳ ಆರಾಧ್ಯ ದೈವವಾಗಿರುವ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಅಗಲಿ ಒಂದು ವರ್ಷ ಕಳೆದಿದೆ. ಈ ನಡುವೆ ಅಪ್ಪು ಸ್ಮರಣೆಯಲ್ಲಿ ಭಾಗವಹಿಸಿದ್ದ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಕೇವಲ ಬೆಂಗಳೂರಷ್ಟೇ ಅಲ್ಲದೇ ರಾಜ್ಯದ ಎಲ್ಲ ಭಾಗಗಳಲ್ಲಿಯೂ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಪುನೀತ್ರನ್ನು ಅಭಿಮಾನಿಗಳು ನಿನ್ನೆ ಸ್ಮರಿಸಿದ್ದಾರೆ. ಈ ನಡುವೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದಲ್ಲಿ ಅಪ್ಪು ಅಭಿಮಾನಿಯೊಬ್ಬ ಆತ್ಮಹತ್ಯೆಗೆ