ರಾಜ್ಯಾದ್ಯಂತ ವರುಣನ ಆರ್ಭಟ ಜೊರಾಗಿದೆ. ಆದರೆ ನಿಗದಿತ ಸಮಯದಲ್ಲಿ ಬಾರದೇ ರೈತನ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ. ಮುಂಗಾರಿನಲ್ಲಿ ಬಿತ್ತನೆ ಮಾಡಿದ್ದ ಹೆಸರು, ಅಲಸಂದೆ, ಉದ್ದು, ಎಳ್ಳು, ತೊಗರಿ ಈಗ ದನಕರುಗಳ ಪಾಲಾಗಿವೆ.ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನಲ್ಲಿ ಆರಿದ್ರಾ ಮಳೆ ಕೈ ಕೊಟ್ಟ ಪರಿಣಾಮ ಕಾಯಿಕಚ್ಚುವ ಹಂತದಲ್ಲಿದ್ದ ಮುಂಗಾರು ಬೆಳೆಗಳು ನಷ್ಟವಾಗಿದೆ. ಅಶ್ವಿನಿ ಭರಣಿ ಮಳೆ ಚೆನ್ನಾಗಿ ಸುರಿದಿದ್ರಿಂದ ಸಂತೋಷಗೊಂಡ ರೈತರು, ಹೆಸರು, ಅಲಸಂದೆ, ಉದ್ದು, ಎಳ್ಳು ಬಿತ್ತನೆ ಮಾಡಿದ್ದರು. ಕಾಲಕಾಲಕ್ಕೆ ಮಳೆಯಾಗಿದ್ರಿಂದ