ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಮಾಜಿ ಕ್ಯಾಪ್ಟನ್ ಅರ್ಜುನ ಅತಿ ಹೆಚ್ಚು ತೂಕದ ಆನೆ ಎಂಬ ಹೆಸರನ್ನು ಈ ಬಾರಿಯೂ ಉಳಿಸಿಕೊಂಡಿದ್ದಾನೆ. ತೂಕ ಹೆಚ್ಚಿಸಿಕೊಳ್ಳುವ ವಿಷಯದಲ್ಲಿ ಭೀಮ ಈ ಬಾರಿಯೂ ಎಲ್ಲರಿಗಿಂತ ಮುಂದಿದ್ದಾನೆ. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಅರಮನೆಯಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆ ನಿತ್ಯವೂ ತಾಲೀಮು ನಡೆಸುತ್ತಿವೆ. ಇಂದು ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಯಿತು.