ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆಗೆ ಕಾರಣರಾದ ಸಚಿವ ಕೆಎಸ್ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಿ ಸಂಪುಟದಿಂದ ಕೂಡಲೇ ವಜಾಗೊಳಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತ ಸಂತೋಷ್ ಕೆ. ಪಾಟೀಲ್ ವಾಟ್ಸಪ್ ಮೆಸೇಜ್ ನಲ್ಲಿ ನನ್ನ ಸಾವಿಗೆ ಸಚಿವ ಈಶ್ವರಪ್ಪ ನೇರ ಕಾರಣ ಎಂದು ಆರೋಪಿಸಿದ್ದಾರೆ. ಅವರ ಆರೋಪ ಡೆತ್ ನೋಟ್ ಗೆ ಸಮಾನ ಎಂದರು. ಸಂತೋಷ್ ಪಾಟೀಲ ಈ ಹಿಂದೆಯೇ