ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಪ್ರಕರಣ ಸಂಬಂಧ ಕರೆ ಮಾಡಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಭಾಸ್ಕರ್ ಬಂಧಿತ ಆರೋಪಿಯಾಗಿದ್ದು,ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ವಡ್ಡಹಳ್ಳಿಯವನು.ಇತ್ತೀಚೆಗೆ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಮೇಲ್ ಬಂದ ಸುದ್ದಿಯನ್ನು ಅಸಾಮಿ ತಿಳಿದುಕೊಂಡಿದ್ದ.ಈ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದ ಬಗ್ಗೆಯೂ ತಿಳಿದುಕೊಂಡಿದ್ದ.ನಿನ್ನೆ ಊರಿನಿಂದ ಬೆಂಗಳೂರಿಗೆ ಅಸಾಮಿ ಬಂದಿದ್ದ.ಬೆಂಗಳೂರು ಪೊಲೀಸರನ್ನು ಮತ್ತೆ ಆಟವಾಡಿಸಬೇಕು ಎಂದು ನಿರ್ಧರಿಸಿದ್ದ.ಇದಕ್ಕಾಗಿ ಗೂಗಲ್ ನಲ್ಲಿ