ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್ಪಾಲ್ನ ಚಿಕ್ಕಪ್ಪ ಹರ್ಜಿತ್ ಸಿಂಗ್ ಹಾಗೂ ಆತನ ಕಾರು ಚಾಲಕನನ್ನು ಪಂಜಾಬ್ ಪೊಲೀಸರು ಭಾನುವಾರ ತಡರಾತ್ರಿ ಬಂಧಿಸಿದ್ದಾರೆ. ಪಂಜಾಬ್ನ ಶಾಕೋಟ್ ಪ್ರದೇಶದಲ್ಲಿ ಅಮೃತ್ಪಾಲ್ನ ಚಿಕ್ಕಪ್ಪ ಹರ್ಜಿತ್ ಸಿಂಗ್ ಹಾಗೂ ಆತನ ಕಾರು ಚಾಲಕನನ್ನು ಬಂಧಿಸಲಾಗಿದೆ. ಬಂಧನಕ್ಕೂ ಮುನ್ನ ಅವರು ಶರಣಾಗಿದ್ದರು ಎಂದು DGP ಸ್ವಪನ್ ಶರ್ಮಾ ತಿಳಿಸಿದ್ದಾರೆ. ಅಮೃತ್ಪಾಲ್ ಸಿಂಗ್ ಇನ್ನೂ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಮುಂದುವರಿಸಿದ್ದಾರೆ. ಇವರು ‘ವಾರಿಸ್ ಪಂಜಾಬ್ ದೇ’ ಸಂಘಟನೆಗಾಗಿ