ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ದೇಶ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಲೀಡರ್ ಇಲ್ಲದ ಪಾರ್ಟಿ ಆಗಿದೆ ಹೇಳಿಕೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಇಬ್ಬಾಗವಾಗಿದೆ. ನಾಲ್ಕು ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲವು ಸಾಧಿಸಿದೆ.ಉತ್ತರ ಪ್ರದೇಶ, ಗೋವಾ, ಮಣಿಪುರ, ಉತ್ತರಾಖಂಡ ನಲ್ಲಿ ಬಿಜೆಪಿ ಸರ್ಕಾರ ಸತತ ಎರಡು ಬಾರಿ ಗೆಲುವು ಸಾಧಿಸಿದೆ.ಕರ್ನಾಟಕದಲ್ಲಿಯೂ ಮುಂದಿನ ಬಾರಿ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ.ದೇಶದ ಸಮಾನ್ಯ ಜನ, ಬಡವರು, ರೈತರು ಪ್ರಧಾನಿ ನರೇಂದ್ರ ಮೋದಿ ಜತೆಗೆ ಇದ್ದಾರೆ. ಕಾಂಗ್ರೆಸ್ ಪಂಚರಾಜ್ಯ ಚುನಾವಣೆಯಲ್ಲಿ ಹೆಸರು ಇಲ್ಲದೆ ಹೋಗಿದೆ.ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ.ಮಹದಾಯಿ ಸಮಸ್ಯೆಯನ್ನು ಶೀಘ್ರದಲ್ಲೇ ಇತ್ಯರ್ಥ ಪಡಿಸಲಾಗುವುದು ಎಂದರು.