ಸಿಎಂ ವಿರುದ್ಧ ಬಹಿರಂಗ ಹೇಳಿಕೆ ನೀಡದಂತೆ ಸಚಿವರಿಗೆ ಸೂಚನೆ

ಬೆಂಗಳೂರು| Krishnaveni K| Last Modified ಗುರುವಾರ, 17 ಜೂನ್ 2021 (09:17 IST)
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಚಿವರಿಗೆ ಖಡಕ್ ಸೂಚನೆ ನೀಡಿದ್ದಾರೆ.  
> ನಿನ್ನೆ ಸಭೆಯಲ್ಲಿ ಬಿಜೆಪಿ ನಾಯಕರಿಗೆ ಅರುಣ್ ಸಿಂಗ್ ಈ ಸೂಚನೆ ನೀಡಿದ್ದಾರೆ. ಅಲ್ಲದೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ಸಿಎಂ ಎಂದು ಖಡಕ್ ಆಗಿ ಹೇಳಿದ್ದಾರೆ. ಈ ಸಮಯದಲ್ಲಿ ಸಚಿವರುಗಳು ಕೊರೋನಾ ನಿಯಂತ್ರಣದ ಬಗ್ಗೆ ಗಮನಹರಿಸಬೇಕು ಎಂದು ಸೂಚನೆ ನೀಡಿದ್ದಾರೆ.>   ಇನ್ನು, 30 ಶಾಸಕರು ಅರುಣ್ ಸಿಂಗ್ ಭೇಟಿಗೆ ಸಮಯ ಕೇಳಿದ್ದಾರೆ. ಬೆಳಿಗ್ಗೆ 9.30 ರಿಂದ ಶಾಸಕರು ಒಬ್ಬೊಬ್ಬರಾಗಿ ಅರುಣ್ ಸಿಂಗ್ ಭೇಟಿ ಮಾಡಿ ತಮ್ಮ ಅಳಲು ತೋಡಿಕೊಳ್ಳಲಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :