ಲೋಕಸಭೆ ಚುನಾವಣೆ ಫಲಿತಾಂಶದ ದಿನ ಹತ್ತಿರವಾಗುತ್ತಿರುವಂತೆ ಬಿಜೆಪಿ ತನ್ನ ಪ್ರತಿಭಟನೆ ತೀವ್ರಗೊಳಿಸುತ್ತಿದೆ. ಏತನ್ಮಧ್ಯೆ ಕಾಂಗ್ರೆಸ್ ಹಾಗೂ ಮೈತ್ರಿ ಸರಕಾರದ ವಿರುದ್ಧ ಬಿಜೆಪಿ ನಾಯಕರು ತಿರುಗಿಬಿದ್ದಿದ್ದಾರೆ.ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ತುರ್ತುಪರಿಸ್ಥಿ ಸ್ಥಿತಿ ನಿರ್ಮಾಣವಾಗುತ್ತದೆ. ಸೋಶಿಯಲ್ ಮೀಡಿಯಾ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ರಾಜ್ಯದ ಮೈತ್ರಿ ಸರ್ಕಾರ ಪ್ರಯತ್ನಿಸುತ್ತಿದೆ. ಪೊಲೀಸ್ ದೌರ್ಜನ್ಯ ಮಿತಿ ಮೀರುತ್ತಿದೆ. ಹೀಗಂತ ಬಿಜೆಪಿ ಶಾಸಕ ಆರ್.ಅಶೋಕ್ ದೂರಿದ್ದಾರೆ.ತೇಜಸ್ವಿನಿ ಅನಂತಕುಮಾರ್ ಮಾತನಾಡಿದ್ದು, ಕರ್ನಾಟಕದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವೇ ಇಲ್ಲ. ಮಹಿಳೆಯರನ್ನೂ