ವಿಜಯಪುರ : ಸರಳತೆಯ ಸ್ವರೂಪ ಶ್ರೀ ಸಿದ್ದೇಶ್ವರ ಶ್ರೀಗಳ ಚಿತೆಯ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಭಕ್ತರಿಗೆ ಚಿತೆಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.ವಿಜಯಪುರದ ಜ್ಞಾನ ಯೋಗಾಶ್ರಮದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರದ ಸ್ಥಳದ ದರ್ಶನಕ್ಕೆ ಭಕ್ತರು ಸಾಲು ಗಟ್ಟಿ ಆಗಮಿಸುತ್ತಿದ್ದಾರೆ. ಇತ್ತ ಶ್ರೀಗಳ ಚಿತಾಭಸ್ಮವನ್ನು ವಿಸರ್ಜಿಸುವ ಬಗ್ಗೆ ಇತರೆ ಶ್ರೀಗಳು ಚರ್ಚೆ ನಡೆಸುತ್ತಿದ್ದಾರೆ.ಗುರುವಾರ ಮೂರನೇ ದಿನದ ಕಾರ್ಯಕ್ರಮ ನಡೆಯಲಿದೆ.