ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರಸ್ ಪಕ್ಷದಿಂದ ಶಾಸಕ ಅಶೋಕ್ ಖೇಣಿ ಅವರು ಸ್ಪರ್ಧೆ ಮಾಡಲಿದ್ದಾರೆ. ಬೀದರ್ ದಕ್ಷಿಣ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸಮ್ಮತಿ ನೀಡಿದ್ದಾರೆ ಎನ್ನಲಾಗಿದೆ. ಕರ್ನಾಟಕ ಮಕ್ಕಳ ಪಕ್ಷದ ಸ್ಥಾಪಕರಾದ ಅಶೋಕ್ ಖೇಣಿ ಅವರು 2013ರ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿದ್ದರು. ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ದಿ.ಧರ್ಮಸಿಂಗ್ ಅವರ ಅಳಿಯ ಚಂದ್ರಸಿಂಗ್ ಅವರಿಗೆ ಟಿಕೆಟ್ ತಪ್ಪಲಿದೆ. ತಾಜಾ ಸುದ್ದಿಗಳನ್ನು ಓದಲು