ಬೆಂಗಳೂರು:ರಾಮನ ಪ್ರಾಣ ಪ್ರತಿಷ್ಟಾಪನೆ ನೋಡಲು ಜನರಲ್ಲಿ ಕಾತರತೆ ಇದೆ. ಹಿಂದೆ ಸೋಮನಾಥ ದೇವಾಲಯ ಪಟೇಲರು ನಿರ್ಮಾಣ ಮಾಡಿದ್ರು. ಈಗ ಮೋದಿ ಅವರ ನೇತೃತ್ವದಲ್ಲಿ ಅದೇ ರೀತಿ ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಟಾಪನೆ ಆಗ್ತಿದೆ. ವಿಗ್ರಹ ಕರ್ನಾಟಕದಲ್ಲಿ ಸಿದ್ದವಾಗಿರುವುದೂ ಸಹ ನಮ್ಮ ಸಂಭ್ರಮ ಹೆಚ್ಚಲು ಕಾರಣವಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಣೆ ಮಾಡಿದೆ. ಇಲ್ಲಿ ಕೂಡ ಪೂಜೆ ನೋಡಲು ಅರ್ಧ ದಿನ ರಜೆ ಘೋಷಣೆಗೆ ಬೇಡಿಕೆ ಇಟ್ಟಿದ್ದಾರೆ. ಜನರಿಗೆ ಯಾವುದೇ ರೀತಿ ಆಚರಣೆಗೆ ತೊಂದರೆ ಆಗದಂತೆ, ತಾವು ರಜೆ ಘೋಷಣೆ ಮಾಡಬೇಕು ಎಂದು ಆರ್ ಅಶೋಕ್ ಒತ್ತಾಯಿಸಿದರು.