ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಬಗ್ಗೆ ತಮಗೆ ಯಾವುದೇ ರೀತಿಯ ಸಾಫ್ಟ್ ಕಾರ್ನರ್ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಅಶ್ವತ್ಥನಾರಾಯಣ ಬಗ್ಗೆ ನನಗೆ ಮೃದು ಧೋರಣೆ ಇದೆ ಕೆಲವರು ಹೇಳಿದ್ದಾರೆ. ಅಂತಹ ಯಾವ ಮೃದು ನಿಲುವು ನನಗೆ ಇಲ್ಲ. ಬದಲಿಗೆ, ದಾಖಲೆ ಇಟ್ಟು ಮಾತನಾಡಿ ಎಂದು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ