ಬೆಂಗಳೂರು: ಉನ್ನತ ಶಿಕ್ಷಣ, ಐಟಿ- ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವರಾಗಿದ್ದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥನಾರಾಯಣ ಅವರು 700 ದಿನಗಳ ತಮ್ಮ ಅಧಿಕಾರಾವಧಿಯಲ್ಲಿ ಒಟ್ಟು 3,760 ಕಡತಗಳನ್ನು ವಿಲೇವಾರಿ ಮಾಡಿ ದಾಖಲೆ ಸ್ಥಾಪಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಅವರು 26ರಂದು ರಾಜೀನಾಮೆ ನೀಡುವವರೆಗೆ ಅಶ್ವತ್ಥನಾರಾಯಣ ಅವರು ತಮ್ಮ ಇಲಾಖೆಗಳಲ್ಲಿದ್ದ ಎಲ್ಲ ಕಡತಗಳನ್ನು ವಿಲೇವಾರಿ ಮಾಡಿ, ಬಾಕಿ ಕಡತಗಳ ಪ್ರಮಾಣವನ್ನು ಶೂನ್ಯಕ್ಕೆ ತಂದಿದ್ದಾರೆ.ಇ-ಆಫೀಸ್ (ಕಾಗದ ರಹಿತ ಕಡತ)