ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಹಲ್ಲೆ ಘಟನೆ ಮತ್ತೆ ಮರುಕಳಿಸಿದೆ. ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಕೊಡಗಹಳ್ಳಿ ಗ್ರಾಮದಲ್ಲಿ ಆಶಾ ಕಾರ್ಯಕರ್ತೆ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.ಸಾಮಾಜಿಕ ಅಂತರ ಕಾಪಾಡಿಕೊಳ್ಳಿ, ಮುಖಕ್ಕೆ ಮಾಸ್ಕ್ ಧರಿಸಿ, ವಯಕ್ತಿಕ ಸ್ವಚ್ಛತೆಗೆ ಒತ್ತು ನೀಡಿ ಎಂದು ಕಿವಿಮಾತು ಹೇಳಿದ್ದಕ್ಕೆ ಕೊರೊನಾ ವಾರಿಯರ್ ಆಗಿರುವ ಕೊಡಗಹಳ್ಳಿ ಗ್ರಾಮದ ಆಶಾ ಕಾರ್ಯಕರ್ತೆ ಕೆ.ವೈ.ಶೋಭಾ ಅವರ ಮೇಲೆ ಗ್ರಾಮದ ಮಂಜೇಗೌಡ, ರುದ್ರೇಶ, ಪ್ರಿಯಾಂಕಾ, ಗೀತ ಮತ್ತು ನಿಖಿಲ್