ಬೆಳಗಾವಿ : ಪ್ರಯಾಣಿಕರೊಬ್ಬರು ಬಸ್ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಕೊಠಡಿಗೆ ನುಗ್ಗಿದ ಪ್ರಯಾಣಿಕ ಅಧಿಕಾರಿ ಮೇಲೆ ಹಲ್ಲೆ ಮಾಡಿರುವ ಆರೋಪವಿದೆ.ಮೊದಲಿಗೆ ಬಸ್ ವಿಚಾರಣೆಯ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಪ್ರಯಾಣಿಕನ ನಡುವೆ ಮಾತಿನ ಚಕಮಕಿ ನಡೆದಿದೆ.