ಮುಂದಿನ 8 ತಿಂಗಳಲ್ಲಿ ವಿಧಾನಸಭಾ ಚುನಾವಣೆ ಇದೆ. ಈ ಹಿನ್ನೆಲೆ ಪಕ್ಷದ ಸಂಘಟನೆ ಹಾಗೂ ಮುಂದಿನ ಚುನಾವಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು. ದೆಹಲಿಯಲ್ಲಿ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಬಿಎಸ್ವೈ, ವಿಧಾನಸಭಾ ಚುನಾವಣೆಗೆ ಇನ್ನು 8 ತಿಂಗಳು ಇದೆ. ಹೀಗಾಗಿ ನಡ್ಡಾ ಅವರನ್ನು ನಮ್ಮ ರಾಜ್ಯದಲ್ಲಿ ಹೆಚ್ಚು ಪ್ರವಾಸ ಮಾಡುವಂತೆ