ಬೆಂಗಳೂರು: 224 ವಿಧಾನಸಭಾ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಗೆ ಕೇಳಿದೆ ಎಂದು ಮೂಲಗಳು ತಿಳಿಸಿವೆ. ತಿಂಗಳ ಅಂತ್ಯಕ್ಕೆ ಪಟ್ಟಿ ನೀಡುವಂತೆ ಹೈಕಮಾಂಡ್ ಸೂಚನೆ ನೀಡಿದೆ. ಸದ್ಯ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ತಯಾರಿಸಲು ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಪೈಪೋಟಿ ಶುರುವಾಗಿದೆ. ತಮ್ಮ ಬೆಂಬಲಿಗರಿಗೆ ಮಣೆ ಹಾಕುವ ವಿಚಾರದಲ್ಲಿ ಸಿಎಂ, ಪರಮೇಶ್ವರ್ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ಶುರುವಾಗಿದೆ.ಈ