ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಅತ್ತ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಇದನ್ನು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ನಾಯಕರು ಹಾಗೂ ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿವೆ. ರಾಹುಲ್ ಗಾಂಧಿ ಅನರ್ಹತೆ ಸಂವಿಧಾನಬಾಹಿರ, ಪ್ರಜಾಪ್ರಭುತ್ವ ವಿರೋಧಿ ಹಾಗೂ ವಿಪಕ್ಷಗಳನ್ನು ಹತ್ತಿಕ್ಕುವ ಹುನ್ನಾರ ಎಂದು ಟೀಕಿಸಿವೆ. ಅಲ್ಲದೇ ಅನರ್ಹತೆ ಖಂಡಿಸಿ ದೇಶಾದ್ಯಂತ ಹೋರಾಟ ಕೂಡ ನಡೆಸಲಾಗುತ್ತಿದೆ. ಕರ್ನಾಟಕದಲ್ಲೂ ಕೋಲಾರದಿಂದಲೇ ‘ಸತ್ಯಮೇವ ಜಯತೆ’ ಹೆಸರಿನಲ್ಲಿ ಹೋರಾಟ ನಡೆಸಲು