ಬೀದರ್ : ಬಿಜೆಪಿ ಮತ್ತು ಆರ್ಎಸ್ಎಸ್ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದ್ದು, ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಸೋಮವಾರ ಬೀದರ್ನ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೀದರ್ ಬಸವಣ್ಣನವರ ಕರ್ಮಭೂಮಿ. ಮೊದಲು ಪ್ರಜಾಪ್ರಭುತ್ವದ ಹಾದಿ ತೋರಿಸಿದ್ದೇ ಬಸವಣ್ಣನವರು. ಇಂದು ದೇಶದಾದ್ಯಂತ ಆರ್ಎಸ್ಎಸ್ ಮತ್ತು ಬಿಜೆಪಿಯವರು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿರುವುದು ಬೇಸರದ ಸಂಗತಿ. ದೇಶದಲ್ಲಿ ಪ್ರಜಾಪ್ರಭುತ್ವನ್ನು ಕಾಪಾಡಿಕೊಳ್ಳಬೇಕೆಂದರೆ