ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಒಂದೇ ಗ್ರಾಮದ 50 ಮಂದಿ ವಿರುದ್ದ ಪೊಲೀಸರು ದೂರು ದಾಖಲಿಸಿರುವ ಘಟನೆ ನಡೆದಿದೆ. ನವೆಂಬರ್ 17ರಂದು ನಂಜನಗೂಡು ತಾಲೂಕಿನ ಜೆ.ಪಿ.ಹುಂಡಿ ಗ್ರಾಮದ ಬಳಿ ಕಾರು-ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸುರೇಶ್ ಸ್ಥಳದಲ್ಲೇ ಮೃತಪಟ್ಟಿದ್ದರು. ಕಾರಿನ ಚಾಲಕನನ್ನು ಬಂಧಿಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ, ಗ್ರಾಮಸ್ಥರು ಹುಲ್ಲಹಳ್ಳಿ ಪೊಲೀಸ್ ಠಾಣೆಯ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ್ದರು.ಈ ಸಂದರ್ಭದಲ್ಲಿ ಕೆಲವರು ನಂಜನಗೂಡು-ಹುಲ್ಲಹಳ್ಳಿ ಹೆದ್ದಾರಿ