ಚುನಾವಣಾ ಪ್ರಚಾರಕ್ಕೆ ಬಂದಾಗ ಪ್ರಶ್ನೆ ಮಾಡಿದ ಮಹಿಳೆ ಮೇಲೆ ಹಾಸನ ಬಿಜೆಪಿ ಮುಖಂಡ, ನಗರಸಭೆ ಅಧ್ಯಕ್ಷ ಮೋಹನ್ ಕುಮಾರ್ ಪುತ್ರ ಚೇತನ್ ಹಲ್ಲೆ ನಡೆಸಿದ್ದಾರೆಂದು ಆರೋಪ ಕೇಳಿ ಬಂದಿದೆ.. ಹಾಸನ ಹೊಸಕೊಪ್ಪಲು ಬಡಾವಣೆಯ ಗಾಂಧಿನಗರದಲ್ಲಿ ಚೇತನ್ ನಿನ್ನೆ ರಾತ್ರಿ ಬಿಜೆಪಿ ಅಭ್ಯರ್ಥಿ ಶಾಸಕ ಪ್ರೀತಂ ಗೌಡ ಪರ ಪ್ರಚಾರಕ್ಕೆ ತೆರಳಿದ್ದರು.