ಬಿರಿಯಾನಿ ಕೊಡಲು ರೆಸ್ಟೋರೆಂಟ್ ಸಿಬ್ಬಂದಿ ತಡ ಮಾಡಿದ್ದಕ್ಕೆ ಸಿಟ್ಟಿಗೆದ್ದು ಮೂವರು ವ್ಯಕ್ತಿಗಳು ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಗ್ರೇಟರ್ ನೋಯ್ಡಾದ ಅನ್ಸಲ್ ಪ್ಲಾಜಾ ಮಾಲ್ನಲ್ಲಿರುವ ರೆಸ್ಟೋರೆಂಟ್ನಲ್ಲಿ ಬುಧವಾರ ರಾತ್ರಿ 10: 30 ರ ಸುಮಾರಿಗೆ ಈ ಘಟನೆ ನಡೆದಿದೆ. ಹಲ್ಲೆ ನಡೆಸಿದ್ದವರನ್ನು ಬಂಧಿಸಲಾಗಿದೆ. ಬಂಧಿತರನ್ನು ಮನೋಜ್, ರರವೇಶ್ ಮತ್ತು ಕ್ರಿಶ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ದಾದ್ರಿ ನಿವಾಸಿಗಳು. ಸಿಬ್ಬಂದಿಗೆ ಥಳಿಸುತ್ತಿರುವ ದೃಶ್ಯವು ರೆಸ್ಟೋರೆಂಟ್ CCTVಯಲ್ಲಿ