ಸುರತ್ಕಲ್ನ ವಿದ್ಯಾದಾಯಿನೀ ಶಾಲಾ ಮುಂಭಾಗದಲ್ಲಿರುವ ಸೌತ್ ಇಂಡಿಯನ್ ಬ್ಯಾಂಕ್ನ ಶಾಖಾ ಕಚೇರಿ ಪಕ್ಕದ ಇದೇ ಬ್ಯಾಂಕಿನ ATM ಕೇಂದ್ರದಲ್ಲಿ JCB ಬಳಸಿ ಹಣ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಕಳ್ಳತನ ಯತ್ನದ ವೇಳೆ ಸಕಾಲದಲ್ಲಿ ಬ್ಯಾಂಕ್ ಸೈರನ್ ಮೊಳಗಿದ್ದರಿಂದ ಜೆಸಿಬಿ ಸಹಿತ ಕಳ್ಳರು ಪರಾರಿಯಾಗಿದ್ದರೂ, ಸಿಕ್ಕಿ ಬೀಳುವ ಭೀತಿಯಿಂದ ಜೋಕಟ್ಟೆ ಬಳಿ ಕೃತ್ಯಕ್ಕೆ ಬಳಸಿದ ಜೆಸಿಬಿಯನ್ನು ಬಿಟ್ಟು ಹೋಗಿದ್ದಾರೆ. ಕಳೆದ ಎರಡು ದಿನದ ಹಿಂದೆ