ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಡುಗಡೆಗೊಳಿಸಿರುವ ಆಡಿಯೋ ಬಗ್ಗೆ ರಾಷ್ಟ್ರಪತಿಗೆ ದೂರು ನೀಡಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ. ಅಪರೇಷನ್ ಕಮಲ ಹೆಸರಿನಲ್ಲಿ ಶಾಸಕರಿಗೆ ಆಮಿಷವೊಡ್ಡಲು ನಡೆಸಿದ ಸಂಭಾಷಣೆಯ ಆಡಿಯೋ ಬಹಿರಂಗವಾಗಿರುವುದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಕೈ ನಾಯಕರು ಮುಂದಾಗಿದ್ದಾರೆ. ಈ ಪ್ರಕರಣವನ್ನು ರಾಷ್ಟ್ರಪತಿ ಅಂಗಳಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ನಿರ್ಧರಿಸಿದೆ.ನಾಳೆ ಸಂಸತ್ ಅಧಿವೇಶನ ಅಂತ್ಯಗೊಳ್ಳುತ್ತಿದ್ದು, ಹೈಕಮಾಂಡ್ ಒಪ್ಪಿಗೆಗೆ ಕಾಯುತ್ತಿದ್ದು, ರಾಹುಲ್ ಗಾಂಧಿಯಿಂದ ಹಸಿರು ನಿಶಾನೆ ಸಿಕ್ಕ ಬಳಿಕ ಆಡಿಯೋ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ರಾಮನಾಥ್ ಕೋವಿಂದ್