ಬೆಂಗಳೂರು: ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ವಿಧಾನ ಪರಿಷತ್ಗೆ ಆಟೋರಿಕ್ಷಾ ಅಥವಾ ಕ್ಯಾಬ್ ಡ್ರೈವರ್ ಪ್ರತಿನಿಧಿಯನ್ನು ನಾಮನಿರ್ದೇಶನ ಮಾಡುವುದಾಗಿ ಜೆಡಿಎಸ್ ಪಕ್ಷದ ರಾಜ್ಯಾದ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.