ಮಂಗಳೂರು : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಹನಿಟ್ರ್ಯಾಪ್ಗೊಳಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಇನ್ಲ್ಯಾಂಡ್ ಅಪಾರ್ಟ್ಮೆಂಟ್ ನಿವಾಸಿ ಅಝ್ವೀನ್ ಸಿ. (24), ಬೈಕಂಪಾಡಿ ಜೋಕಟ್ಟೆಯ ಕೆಬಿಎಸ್ ಬೊಟ್ಟು ಹೌಸ್ ನಿವಾಸಿ ಸಫ್ನಾ ಅಲಿಯಾಸ್ ಹತೀಜಮ್ಮ (23) ಬಂಧಿತ ಆರೋಪಿಗಳು ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಬುಧವಾರ ಸುದ್ದಿಗೋಷ್ಠಿಯಲ್ಲಿಮಾಹಿತಿ ನೀಡಿದ್ದಾರೆ. ದುಬೈನಲ್ಲಿ ಉದ್ಯೋಗದಲ್ಲಿದ್ದು, ವಾಪಾಸಾಗಿದ್ದ ವ್ಯಕ್ತಿಯೊಬ್ಬರ ಮನೆಗೆ ಅಝ್ವಿನ್