ರಾಜ್ಯದಾದ್ಯಂತ ನಾಡಹಬ್ಬದ ದಸರಾ ಕಳೆಗಟ್ಟಿದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಆಯುಧ ಪೂಜೆ ಹಬ್ಬವನ್ನ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಜನರು ತಮ್ಮ ವಾಹನಗಳಿಗೆ ಪೂಜೆ ಮಾಡಿಸಿಕೊಳ್ಳಲು ಬೆಳಗ್ಗಿನಿಂದಲೇ ದೇವಸ್ಥಾನಗಳ ಮುಂದೆ ಸಾಲುಗಟ್ಟಿ ನಿಂತಿದ್ದರು. ಇನ್ನು ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿಯೂ ಚಾಮುಂಡೇಶ್ವರಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಯಿತು. ಜೊತೆಗೆ ಪೊಲೀಸರ ಶಸ್ತ್ರಾಸ್ತ್ರಗಳಿಗೂ ಪೂಜಿ ಮಾಡಲಾಗಿತ್ತು. ಈ ವೇಳೆ ಪೊಲೀಸ್ ವಾಹನಗಳಿಗೂ ವಿಶೇಷ ಪೂಜೆ ಸಲ್ಲಿಸಲಾಯಿತು. ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್