ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶವನ್ನು ಖಂಡಿಸಿ ಕೇರಳ ಬಂದ್ಗೆ ಕರೆ ನೀಡಲಾಗಿದೆ. ಶಬರಿಮಲೆ ಕರ್ಮ ಸಮಿತಿ ಬಂದ್ಗೆ ಕರೆ ನೀಡಿದ್ದು, ಬಿಜೆಪಿ, ಹಿಂದೂಪರ ಸಂಘಟನೆಗಳು ಹಾಗೂ ಯುಡಿಎಫ್ ಬಂದ್ಗೆ ಬೆಂಬಲ ಘೋಷಿಸಿವೆ. ಏತನ್ಮಧ್ಯೆ ಪಂದಳಂ ಹತ್ತಿರ ಪ್ರತಿಭಟನೆ ನಡೆಸುತ್ತಿದ್ದ ಭಕ್ತರ ಮೇಲೆ ನಡೆದ ಕಲ್ಲು ತೂರಾಟದಲ್ಲಿ ಭಕ್ತನೊಬ್ಬ ಸಾವನ್ನಪ್ಪಿದ್ದಾನೆ. ಪಂದಳಂ ಬಳಿ ಪ್ರತಿಭಟನೆ ನಡೆಸುತ್ತಿದ್ದ ಅಯ್ಯಪ್ಪ ಭಕ್ತರ ಮೇಲೆ ಸಿಪಿಎಂ ಕಚೇರಿಯ ಮೇಲ್ಬಾಗದಿಂದ ಕಲ್ಲು ತೂರಾಟ ನಡೆಸಲಾಗಿದ್ದು ಕಲ್ಲೇಟಿಗೆ