ಅಯ್ಯಪ್ಪ ಸ್ವಾಮಿ ಭಕ್ತರಿಂದ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ| Jagadeesh| Last Modified ಭಾನುವಾರ, 21 ಅಕ್ಟೋಬರ್ 2018 (16:01 IST)
ಅಯ್ಯಪ್ಪ ಸ್ವಾಮಿ ಸನ್ನಧಿಗೆ ಮಹಿಳೆಯರು ಮಾಡುವುದನ್ನು ವಿರೋಧಿಸಿ ಪ್ರತಿಭಟನೆ‌ ನಡೆಸಲಾಗಿದೆ.

ಅಯ್ಯಪ್ಪ ಸ್ವಾಮಿ ಭಕ್ತರಿಂದ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಸುಪ್ರೀಂ ಕೋರ್ಟ್ ತೀರ್ಪು ಮರು ಪರಿಶೀಲನೆಗೆ ಆಗ್ರಹ ಮಾಡಲಾಯಿತು.

ಸುಮಾರು ಮೂರು ಸಾವಿರಕ್ಕೂ ಹೆಚ್ಚು ಭಕ್ತರಿಂದ ಪ್ರತಿಭಟನಾ ಮೆರವಣಿಗೆ ಜರುಗಿತು. ಹುಬ್ಬಳ್ಳಿಯ ಸ್ಟೇಷನ್ ರಸ್ತೆಯಲ್ಲಿರುವ ಈಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಮೂರು ಸಾವಿರ ಮಠದ ವರೆಗೆ ನಡೆಯಿತು.

ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮೂರು ಸಾವಿರ ಮಠದಲ್ಲಿ ಸಭೆ ಯಾಗಿ ಮಾರ್ಪಾಡಾಯಿತು.

ಕೇರಳದ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರು ಪ್ರವೇಶಿಸಬಾರದು ಎಂದು ಆಗ್ರಹಿಸಿ ಈ ಪ್ರತಿಭಟನೆ ನಡೆಯಿತು.

ಇದರಲ್ಲಿ ಇನ್ನಷ್ಟು ಓದಿ :