ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ನಾನು ಅಣ್ಣ-ತಮ್ಮಂದಿರಂತೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಯೂಟರ್ನ್ ಹೊಡೆದಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹಾಗೂ ಬಿ.ಎಸ್.ಯಡಿಯೂರಪ್ಪ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ರಾಯಣ್ಣ ಬ್ರಿಗೇಡ್ ಮುಂದುವರೆಯುತ್ತೇ ಎಂದು ಸ್ಪಷ್ಟಪಡಿಸಿದರು. ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ಅಸಮಾಧಾನ ಇದೆ. ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ಬಿಜೆಪಿ ತತ್ವದ ಬಗ್ಗೆ ಗೊತ್ತಿಲ್ಲ. ಧೀನ ದಯಾಳ ಯಾರು ಎನ್ನುವುದೆ ಗೊತ್ತಿಲ್ಲ. ಅಂಥವರನ್ನು ಪದಾಧಿಕಾರಿಗಳಾಗಿ ನೇಮಕ