ಕಲ್ಯಾಣ ಕರ್ನಾಟಕದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಿಂದ ರಾಜ್ಯದ ಈಶಾನ್ಯ ಭಾಗವು ವಿಮಾನಯಾನ ಸಂಪರ್ಕಕ್ಕೆ ಬಂದಿರುವುದರಿಂದ ದೇಶ, ವಿದೇಶದಿಂದ ಉದ್ಯಮಿಗಳು ಇಲ್ಲಿ ಹಣ ಹೂಡಿಕೆ ಮಾಡಲಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಈ ವಿಮಾನ ನಿಲ್ದಾಣ ಹೊಸ ಅಧ್ಯಾಯ ನಿರ್ಮಿಸಲಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ರು.ಕಲಬುರಗಿ ವಿಮಾನ ನಿಲ್ದಾಣ ಆವರಣದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ, ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಹಾಗೂ ಕರ್ನಾಟಕ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯು ಜಂಟಿಯಾಗಿ ಆಯೋಜಿಸಿದ್ದ