ಕೋವಿಡ್ ನಿಯಂತ್ರಣಕ್ಕೆ ಯಾವುದೇ ಕೊರತೆಯಾಗಬಾರದು ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಅಗತ್ಯವಾದ ಎಲ್ಲ ವೈದ್ಯಕೀಯ ಉಪಕರಣಗಳನ್ನು ವಿಪತ್ತು ನಿರ್ವಹಣಾ ಅನುದಾನದಲ್ಲಿ ಖರೀದಿಸುವಂತೆ ಹಾವೇರಿ ಜಿಲ್ಲಾಡಳಿತಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ನಿರ್ದೇಶನ ನೀಡಿದ್ದಾರೆ.ಮುಂದಿನ ಎರಡು ವಾರಗಳ ಕಾಲ ಅತ್ಯಂತ ಸಂದಿಗ್ಧ ಸಮಯ. ಈ ಸಂದರ್ಭದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಕೊರೊನಾ ಸೋಂಕು ಪತ್ತೆಯಾದ ತಕ್ಷಣ ಅವರನ್ನು ಸಾಗಾಣಿಕೆಗೆ ಪ್ರತ್ಯೇಕವಾದ ಆ್ಯಂಬುಲೆನ್ಸ್ ಕಾಯ್ದಿರಿಸಿಕೊಳ್ಳಬೇಕು.