ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಾದಾಮಿಯಲ್ಲಿ ಸ್ಪರ್ಧಿಸುವ ನಿರ್ಧಾರ ಮಾಡಿದ ಬೆನ್ನಲ್ಲೇ ಗಣಿ ದಣಿ ಬಿ ಶ್ರೀರಾಮುಲು ಕೂಡಾ ಬಿಜೆಪಿಯಿಂದ ಬಾದಾಮಿಯಲ್ಲಿ ಸ್ಪರ್ಧಿಸಲು ಹೈಕಮಾಂಡ್ ಸೂಚನೆ ನೀಡಿದೆ.ಇದರೊಂದಿಗೆ ಅಂದು ಗಣಿ ದಣಿ ಜನಾರ್ಧನ ರೆಡ್ಡಿ ಸಿಎಂ ಸಿದ್ದರಾಮಯ್ಯರನ್ನು ಸೋಲಿಸುವಂತೆ ಮಾಡಿದ ಸವಾಲು ನಿಜವಾಗುತ್ತಾ? ಅದಕ್ಕಾಗಿಯೇ ಜನಾರ್ಧನ ರೆಡ್ಡಿ ಸಹೋದರ ಶ್ರೀರಾಮುಲು ಬಾದಾಮಿಯಿಂದ ಕಣಕ್ಕಿಳಿಯುತ್ತಿದ್ದಾರಾ ಎಂಬ ಅನುಮಾನ ಮೂಡಿದೆ.ನಾಳೆ ಶ್ರೀರಾಮುಲು ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸುವಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ.