ಕಾಂಗ್ರೆಸ್ ಗೆ ಕೈ ಕೊಟ್ಟಿರುವ ಮಾಜಿ ಸಚಿವ ಬಾಬುರಾವ ಚಿಂಚನಸೂರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಕ್ಷದ ಧ್ವಜ ನೀಡಿ ಚಿಂಚನಸೂರ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ನ ಬಾಬುರಾವ ಚಿಂಚನಸೂರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರಮುಖರ ಸಮ್ಮುಖದಲ್ಲಿ ಕಮಲ ಪಾಳೆಯಕ್ಕೆ ಸೇರ್ಪಡೆಗೊಂಡಿದ್ದಾರೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ವಪಕ್ಷದ ನಾಯಕರು ಹಾಗೂ ಸ್ಥಳೀಯ ಮುಖಂಡರಿಂದಲೇ ನನಗೆ ಹಾನಿಯಾಗಿದೆ.