ಬೆಂಗಳೂರು : ಇಂದು ಕೇರಳ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕದಿಂದ ಕೇರಳಕ್ಕೆ ಸಂಚರಿಸುವ ಎಲ್ಲಾ ಕೆಎಸ್ ಆರ್ ಟಿಸಿ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಶಬರಿಮಲೆ ದೇಗುಲಕ್ಕೆ ಬುಧವಾರ ಇಬ್ಬರು ಮಹಿಳೆಯರು ಪ್ರವೇಶಿಸಿದ್ದರು. ಇದನ್ನು ಖಂಡಿಸಿ ಸ್ಥಳೀಯ ಸಂಘಟನೆಗಳು ಇಂದು ಕೇರಳ ಬಂದ್ ಗೆ ಕರೆ ನೀಡಿದ್ದು, ಕೇರಳದಲ್ಲಿ ಬಾರೀ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಕೇರಳಕ್ಕೆ ಹೋಗಬೇಕಿದ್ದ 3 ಬಸ್ ಗಳು, ಮಂಗಳೂರಿನಿಂದ ಹೇಗಬೇಕಿದ್ದ