ವಿಶ್ವದೆಲ್ಲೆಡೆ ಇಂದು ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಭಾರತದಲ್ಲೂ ಮುಸ್ಲಿಮರು ಬಕ್ರೀದ್ ಶುಭಾಶಯಗಳನ್ನು ಹಂಚಿಕೊಂಡು ಆಚರಣೆಯಲ್ಲಿ ತೊಡಗಿದ್ದಾರೆ. ಬಕ್ರೀದ್ ಬಲಿದಾನದ ಹಬ್ಬವನ್ನಾಗಿ ಆಚರಣೆ ಮಾಡಲಾಗುತ್ತದೆ. ರಾಜ್ಯದಾದ್ಯಂತ ಹಬ್ಬವನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಕೆಲ ಕಾನೂನು ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸರ್ಕಾರ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡಿದೆ. ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸುವವರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯಮ 2020ರ ನಿಯಮಗಳು