ಚಿಕ್ಕಾಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಇನ್ಮುಂದೆ ಖಾಸಗಿ ಮತ್ತು ವೈಯಕ್ತಿಕ ವಾಹನಗಳ ಪ್ರವೇಶವನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಿಂದ 60 ಕಿ.ಮೀ ದೂರದಲ್ಲಿರುವ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ವಾರಾಂತ್ಯದಲ್ಲಿ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಇದರಿಂದ ಸಾಕಷ್ಟು ಪ್ರಮಾಣದಲ್ಲಿ ಟ್ರಾಫಿಕ್ ಸಮಸ್ಯೆ ಕೂಡ ಉಂಟಾಗುತ್ತಿದೆ. ಈ ಹಿನ್ನೆಲೆ ಪ್ರವಾಸಿಗರಿಗಾಗಿ ಎಲೆಕ್ಟ್ರಾನಿಕ್ ಬಸ್ಗಳನ್ನು ಕಲ್ಪಿಸಲು ನಿರ್ಧರಿಸಲಾಗುತ್ತಿದೆ. ಇದು ಪ್ರವಾಸೋದ್ಯಮ ಇಲಾಖೆ ಯೋಜನೆಯ ಒಂದು ಭಾಗವಾಗಿದ್ದು, ಮುಂದಿನ 6-8