ಸಿಂಧಗಿ : ಬಿಜೆಪಿಯವರು ನನ್ನ ವೈಯಕ್ತಿಕ ವಿಚಾರಗಳನ್ನು ಇಲ್ಲಿಗೆ ಬಿಡುವುದು ಒಳ್ಳೆಯದು. ಇಲ್ಲವಾದರೆ ಆರ್ ಎಸ್ ಎಸ್ ಶಾಖೆಗಳಿಂದ ತರಬೇತಿ ಪಡೆದುಕೊಂಡು ಬಿಜೆಪಿಗೆ ಬಂದವರೆಲ್ಲ ನಡೆಸುತ್ತಿರುವ ಅಸಹ್ಯವನ್ನು ಎಲ್ಲವನ್ನೂ ಬಿಚ್ಚಿಡಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಎಚ್ಚರಿಕೆ ನೀಡಿದರು. ಇವತ್ತು ಬಿಜೆಪಿಯವರು ನನ್ನ ಖಾಸಗಿ ವಿಚಾರಗಳನ್ನು ಕೆದಕಿದ್ದಾರೆ. ಮತ್ತೆ ಮತ್ತೆ ಕೆದಕುತ್ತಿದ್ದಾರೆ. ಅವರಿಗೆ ನೇರವಾಗಿ ಹೇಳಲು ಬಯಸುತ್ತೇನೆ. ನಾನು ಆರ್ ಎಸ್ ಎಸ್ ಬಗ್ಗೆ ಎತ್ತಿರುವ ಪ್ರಶ್ನೆಗಳ ಬಗ್ಗೆ