ರೈತರ ಸಾಲಸಂಪೂರ್ಣ ಮನ್ನಾ ಹಾಗೂ ಮಹದಾಯಿ ಮತ್ತು ಕಳಸಾ- ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಕಳಸಾ -ಬಂಡೂರಿ ಹೋರಾಟ ಸಮನ್ವಯ ಸಮಿತಿ ಹೋರಾಟಗಾರರು ಬೆಂಗಳೂರು ಚಲೋ ನಡೆಸಿದರು. ನಗರದ ಸಂಗೊಳ್ಳಿರಾಯಣ್ಣ ವೃತ್ತದಿಂದ ರೈಲು ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆ ಬಳಿಕ ರೈಲಿನಲ್ಲಿ ಬೆಂಗಳೂರಿನತ್ತ ರೈತರ ಪ್ರಯಾಣ ಬೆಳೆಸಿದರು. ರಾಜ್ಯ ಸರ್ಕಾರ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಮಹದಾಯಿ ವಿವಾದ ಕೂಡಲೇ ಇತ್ಯರ್ಥ ಪಡಿಸಬೇಕೆಂದು ಒತ್ತಾಯಿಸಿ, ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ನಾಲ್ಕು