ಬೆಂಗಳೂರು : ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಏಪ್ರಿಲ್ 1 ರಂದು ಲೋಗೋ, ಥೀಮ್ ಸಾಂಗ್ ಹಾಗೂ ಜೆರ್ಸಿ ಬಿಡುಗಡೆಗೊಳಿಸಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದರು.ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಎರಡನೇ ಆವೃತ್ತಿಯನ್ನು ಆಯೋಜಿಸುವುದು ನಮ್ಮ ಕರ್ನಾಟಕಕ್ಕೆ ಸಿಕ್ಕಿರುವುದು ಹೆಮ್ಮೆಯ ವಿಷಯ.ಏಪ್ರಿಲ್ 24 ರಿಂದ ಮೇ 03